ಹೊಸಂಗಡಿ:ಜಿ ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ, ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯ. ಪೆರಾಡಿ ಸಿಎ ಬ್ಯಾಂಕ್ ಪ್ರಸ್ತುತ ನಿರ್ದೇಶಕ ಹರೀಪ್ರಸಾದ್ ಹೊಸಂಗಡಿ 45 ವರ್ಷ ಮೂಡಬಿದ್ರೆ ಖಾಸಾಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಇಂದು ಬೈಕ್ ನಲ್ಲಿ ಕೆಲಸ ನಿಮಿತ್ತ ತೆರಲುತ್ತಿರುವಾಗ ಬೈಕ್ ನಿಂದ ಬಿದ್ದರೆನ್ನಲಾಗಿದೆ. ಕೂಡಲೇ ಮೂಡಬಿದ್ರೆ ಖಾಸಾಗಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾದರು ಎಂದು ತಿಳಿದು ಬಂದಿದೆ.
ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಉತ್ತಮ ಕೆಲಸ ಕಾರ್ಯ ಮಾಡುತ್ತಿದ್ದರು. ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ,ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.