23 C
ಪುತ್ತೂರು, ಬೆಳ್ತಂಗಡಿ
April 17, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

ಮೂಡಬಿದಿರೆ: ವಿವೇಕಾನಂದರು ಹುಡುಗಾಟಿಕೆಯ ವಯಸ್ಸಿನಲ್ಲಿ ಇಡೀ ಪ್ರಪಂಚವೇ ತಮ್ಮ ಕಡೆ ತಿರುಗಿ ನೋಡುವಂತೆ ಮಾಡಿದ ವೀರ ಸನ್ಯಾಸಿ. ಇಂತಹ ವ್ಯಕ್ತಿ ಬದುಕಿ ಬಾಳಿದಂತಹ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಎಂದು ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕು. ಯಾವುದನ್ನು ಪರೀಕ್ಷೀಸದೆ ನೇರವಾಗಿ ಒಪ್ಪಿಕೊಳ್ಳದ ಮನಸ್ಥಿತಿ ವಿವೇಕಾನಂದರದು. ಅವರು ತಮ್ಮ ಜೀವನದ ಮೂಲಕ ಯುವಕರಿಗೆ ದೃಷ್ಠಿಯ ಮಿತಿಯೊಳಗೆ ಹೊಸ ಹೋರಾಟದ ತತ್ವಗಳನ್ನು ಮತ್ತು ಸಮಾಜದ ಮೇಲೆ ಬಲವನ್ನು ತರುವ ಮಾರ್ಗಗಳನ್ನು ತೋರಿಸಿದ್ದರು. ನಮ್ಮ ದೇಶವು ಯಾವುದೇ ಸಮಸ್ಯೆಗಳನ್ನು ಎದುರಿಸಲು ಬದಲಾಗಲು ಮತ್ತು ಮುಂದುವರಿಯಲು ಯುವಕ ಸಮಾಜದ ಸಕ್ರೀಯ ಭಾಗವಾಗಬೇಕು. ಈ ದೇಶದಲ್ಲಿರುವ ಪ್ರತಿಯೊಬ್ಬ ಯುವಕರು ಸ್ವಾಮಿ ವಿವೇಕಾನಂದರ ಚಿಂತನೆಯನ್ನು ಮೈಗೂಡಿಸಿಕೊಂಡು ಬಲಿಷ್ಠವಾದ ರಾಷ್ಟ್ರವನ್ನು ನಿರ್ಮಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ.ಸಂಪತ್‌ಕುಮಾರ್ ಕಲ್ಲಬೆಟ್ಟುವಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಯುವಕರು ದೇಶ ಕಟ್ಟುವ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಸಮಾಜಕ್ಕೆ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯ ಕೆಲಸವನ್ನು ಮಾಡಬೇಕು. ವಿವೇಕಾನಂದರು ದೇಶ ಕಂಡ ಮಹಾನ್ ವ್ಯಕ್ತಿ. ಅವರ ಚಿಂತನೆಗಳು ನಮ್ಮ ಸಮಾಜಕ್ಕೆ ಮಾರ್ಗದರ್ಶಿಗಳಾಗಿವೆ. ಅಂತಹ ಶ್ರೇಷ್ಠ ಪುರುಷನಂತೆ ಪ್ರತಿಯೊಬ್ಬರೂ ದೇಶಾಭಿಮಾನವನ್ನು ಹೊಂದಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಓಂ ರಾಷ್ಟ್ರೀಯ ಯುವ ದಿನದ ಮಹತ್ವವನ್ನು ವಾಚಿಸಿದರು. ಶಿಕ್ಷಕಿ ಜಯಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿವೇಕಾನಂದರ ಜೀವನ ಕುರಿತಾದ ರೂಪಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

Related posts

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!