ಬೆಳ್ತಂಗಡಿ : ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರವನ್ನು ಜ.13 ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಉಪಕೃಷಿ ನಿರ್ದೇಶಕ ಶಿವಶಂಕರ್ ಹೆಚ್. ದಾನೆಗೊಂಡರ್ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರು, ಹಿರಿಯ ವಿಜ್ಞಾನಿ ಡಾ. ಟಿ ಜೆ ರಮೇಶ್ ಉಪಸ್ಥಿತರಿದ್ದರು.
ನಂತರ ದೇಸಿ ತಳಿಗಳ ಸಂರಕ್ಷಣೆ ಮತ್ತು ಅಗತ್ಯತೆ ಕುರಿತು ಮಣ್ಣು ವಿಜ್ಞಾನ ವಿಭಾಗದ ವಿಜ್ಞಾನಿ ಡಾ. ಮಲ್ಲಿಕಾರ್ಜುನ ಎಲ್, ಸುರ್ಯ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಭತ್ತದ ತಳಿ ಸಂರಕ್ಷಣೆ, ಅಗತ್ಯತೆ ವಿಧಾನ, ಹಾಗೂ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ ಪುರಸ್ಕೃತ ತಳಿ ತಪಸ್ವಿ ಬಿ. ಕೆ. ದೇವರಾವ್ ರವರು ಭತ್ತದ ತಳಿ ಸಂರಕ್ಷಣೆ ಬಗ್ಗೆ ಉಪನ್ಯಾಸವನ್ನು ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಿಬ್ಬಂಗಳು ಹಾಗೂ ಪ್ರಗತಿಪರ ಕೃಷಿಕರು ಭಾಗವಹಿಸಿದರು.
ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಿಬ್ಬಂದಿಗಳು ಪ್ರಾರ್ಥಿಸಿ, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಎ.ಡಿ ಸ್ವಾಗತಿಸಿದರು.ಬೆಳ್ತಂಗಡಿ ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯ ಕೃಷಿ ನಿರ್ದೇಶಕ ಗಣೇಶ್ ಧನ್ಯವಾದವಿತ್ತರು.