April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ. ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ. 11 , 12 ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ “ವಿನ್ನರ” ದ 14ರ ವಯೋಮಾನದ ಬಾಲಕಿಯರ ಗುಂಡೆಸೆತ ಮತ್ತು ಈಟಿ ಎಸೆತ ಸ್ಪರ್ಧೆಯಲ್ಲಿ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ, ಬೆಳಾಲು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಈಟಿ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.


ವಿಜೇತ ವಿದ್ಯಾರ್ಥಿನಿಯನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ತರಬೇತಿ ನೀಡಿದ್ದರು. ಹಾಗೂ ಬೆಳ್ತಂಗಡಿ ಬಿಐಇಆರ್‌ಟಿ  ಶ್ರೀಮತಿ ಸೀತಾ ಆರ್ ಶೇಟ್ ಮಾರ್ಗದರ್ಶನ ನೀಡಿದ್ದರು.

Related posts

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya
error: Content is protected !!