ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ 46 ವರ್ಷಗಳ ಕಾಲ ಅಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಲ್ಲದೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ವಿವಿಧ ಸಂಘ ಸಂಸ್ಥೆಗಳಿಗೆ, ವಿದ್ಯಾರ್ಥಿಗಳಿಗೆ, ಸರಕಾರಿ ಇಲಾಖೆಗಳ ನೌಕರವರ್ಗದವರಿಗೆ, ಶಿಕ್ಷಕರಿಗೆ ವಿವಿಧ ವಿಷಯಗಳಲ್ಲಿ ತರಬೇತಿ ನೀಡಿದ್ದಾರೆ.
ನಾಟಕ, ಯಕ್ಷಗಾನಗಳಲ್ಲಿ ಹವ್ಯಾಸಿ ನಟರಾಗಿ ಅಭಿನಯಿಸಿದ್ದಲ್ಲದೆ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಮಾರ್ಗದರ್ಶನ ನೀಡಿದ್ದಾರೆ. ನಾಡಿನ ವಿವಿಧ ಪತ್ರಿಕೆಗಳಲ್ಲಿ ಲೇಖನಗಳನ್ನು ಪ್ರಕಟಿಸಿದ್ದಲ್ಲದೆ ಆಕಾಶವಾಣಿಯಲ್ಲೂ ಕಾರ್ಯಕ್ರಮಗಳನ್ನು ನೀಡಿದ್ದಾರೆ. ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪುಸ್ತಕಗಳನ್ನು ಬರೆದಿದ್ದಾರೆ.
ಇವರ ಈ ಸಾಧನೆಗಳನ್ನು ಗುರುತಿಸಿ ಅಖಿಲ ಹವ್ಯಕ ಮಹಾಸಭೆಯು ತನ್ನ ತೃತೀಯ ವಿಶ್ವ ಸಮ್ಮೇಳನದಲ್ಲಿ ಹವ್ಯಕ ಶಿಕ್ಷಣ ರತ್ನ
ಪ್ರಶಸ್ತಿ ನೀಡಿ ಪುರಸ್ಕರಿಸಿದೆ.