23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

ಮೂಡಬಿದಿರೆ: ವಿವೇಕಾನಂದರು ಹುಡುಗಾಟಿಕೆಯ ವಯಸ್ಸಿನಲ್ಲಿ ಇಡೀ ಪ್ರಪಂಚವೇ ತಮ್ಮ ಕಡೆ ತಿರುಗಿ ನೋಡುವಂತೆ ಮಾಡಿದ ವೀರ ಸನ್ಯಾಸಿ. ಇಂತಹ ವ್ಯಕ್ತಿ ಬದುಕಿ ಬಾಳಿದಂತಹ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಎಂದು ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕು. ಯಾವುದನ್ನು ಪರೀಕ್ಷೀಸದೆ ನೇರವಾಗಿ ಒಪ್ಪಿಕೊಳ್ಳದ ಮನಸ್ಥಿತಿ ವಿವೇಕಾನಂದರದು. ಅವರು ತಮ್ಮ ಜೀವನದ ಮೂಲಕ ಯುವಕರಿಗೆ ದೃಷ್ಠಿಯ ಮಿತಿಯೊಳಗೆ ಹೊಸ ಹೋರಾಟದ ತತ್ವಗಳನ್ನು ಮತ್ತು ಸಮಾಜದ ಮೇಲೆ ಬಲವನ್ನು ತರುವ ಮಾರ್ಗಗಳನ್ನು ತೋರಿಸಿದ್ದರು. ನಮ್ಮ ದೇಶವು ಯಾವುದೇ ಸಮಸ್ಯೆಗಳನ್ನು ಎದುರಿಸಲು ಬದಲಾಗಲು ಮತ್ತು ಮುಂದುವರಿಯಲು ಯುವಕ ಸಮಾಜದ ಸಕ್ರೀಯ ಭಾಗವಾಗಬೇಕು. ಈ ದೇಶದಲ್ಲಿರುವ ಪ್ರತಿಯೊಬ್ಬ ಯುವಕರು ಸ್ವಾಮಿ ವಿವೇಕಾನಂದರ ಚಿಂತನೆಯನ್ನು ಮೈಗೂಡಿಸಿಕೊಂಡು ಬಲಿಷ್ಠವಾದ ರಾಷ್ಟ್ರವನ್ನು ನಿರ್ಮಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ.ಸಂಪತ್‌ಕುಮಾರ್ ಕಲ್ಲಬೆಟ್ಟುವಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಯುವಕರು ದೇಶ ಕಟ್ಟುವ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಸಮಾಜಕ್ಕೆ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯ ಕೆಲಸವನ್ನು ಮಾಡಬೇಕು. ವಿವೇಕಾನಂದರು ದೇಶ ಕಂಡ ಮಹಾನ್ ವ್ಯಕ್ತಿ. ಅವರ ಚಿಂತನೆಗಳು ನಮ್ಮ ಸಮಾಜಕ್ಕೆ ಮಾರ್ಗದರ್ಶಿಗಳಾಗಿವೆ. ಅಂತಹ ಶ್ರೇಷ್ಠ ಪುರುಷನಂತೆ ಪ್ರತಿಯೊಬ್ಬರೂ ದೇಶಾಭಿಮಾನವನ್ನು ಹೊಂದಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಓಂ ರಾಷ್ಟ್ರೀಯ ಯುವ ದಿನದ ಮಹತ್ವವನ್ನು ವಾಚಿಸಿದರು. ಶಿಕ್ಷಕಿ ಜಯಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿವೇಕಾನಂದರ ಜೀವನ ಕುರಿತಾದ ರೂಪಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!