ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ. ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ. 11 , 12 ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ “ವಿನ್ನರ” ದ 14ರ ವಯೋಮಾನದ ಬಾಲಕಿಯರ ಗುಂಡೆಸೆತ ಮತ್ತು ಈಟಿ ಎಸೆತ ಸ್ಪರ್ಧೆಯಲ್ಲಿ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ, ಬೆಳಾಲು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಈಟಿ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ವಿಜೇತ ವಿದ್ಯಾರ್ಥಿನಿಯನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ತರಬೇತಿ ನೀಡಿದ್ದರು. ಹಾಗೂ ಬೆಳ್ತಂಗಡಿ ಬಿಐಇಆರ್‌ಟಿ ಶ್ರೀಮತಿ ಸೀತಾ ಆರ್ ಶೇಟ್ ಮಾರ್ಗದರ್ಶನ ನೀಡಿದ್ದರು.