ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಜರಗಿದ 68ನೇ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗಳಿಸಿದ ತಂಡದ ಸದಸ್ಯರಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತದ ಮೂಲಕ ಅಭಿನಂದಿಸಲಾಯಿತು.


ವಿದ್ಯಾರ್ಥಿಗಳು ವಿಜಯವಾಡದಿಂದ ಆಗಮಿಸಿದ ಸಂದರ್ಭ ಜ.13 ರಂದು ಉಜಿರೆಯಿಂದ ವಾಹನಗಳ ಭವ್ಯ ಮೆರವಣಿಗೆ ಮೂಲಕ ಮುಂಡಾಜೆಗೆ ಕರೆತರಲಾಯಿತು.


ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ನಾರಾಯಣ ಗೌಡ, ಸಂಚಾಲಕನಾರಾಯಣ ಫಡಕೆ, ಮುಂಡಾಜೆ ಪಂಚಾಯಿತಿ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ, ಪಿಡಿಒ ಗಾಯತ್ರಿ, ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಗೀತಾ, ಉಪನ್ಯಾಸಕ ವೃಂದದವರು, ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಗುಣಪಾಲ ಎಂ.ಎಸ್., ಸಂದೀಪ್ ಶೆಟ್ಟಿ, ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಲಾವಿದ ಜಯರಾಮ ಕೆ. ವಿದ್ಯಾರ್ಥಿಗಳ ಸಾಧನೆ ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೆ ಮುಂಡಾಜೆಯ ವಿರಾಟ್ ಹಿಂದೂ ಸೇವಾ ಸಂಘ ಸಹಕರಿಸಿತು.

Related posts

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya
error: Content is protected !!