30.4 C
ಪುತ್ತೂರು, ಬೆಳ್ತಂಗಡಿ
January 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಉಜಿರೆಯ ಬೆನಕ ಆಸ್ಪತ್ರೆಗೆ ಜ.13 ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥಂಗಳು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು.

ನಂತರ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ ಪರಿಶ್ರಮದಿಂದ ಸಕಲ ಸೌಲಭ್ಯಗಳನ್ನು ಒಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿರುವುದು ಅವರ ನಿರಂತರ ಸೇವೆಯ ದ್ಯೋತಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದೆಯೂ ಇದೆ ರೀತಿ ನಡೆಸಿಕೊಂಡು ಪರಿಸರದ ಜನರಿಗೆ ಉತ್ತಮ ಆರೋಗ್ಯ ನೀಡಲು ಶ್ರೀ ಸುಬ್ರಮಣ್ಯನ ಅನುಗ್ರಹ ಸದಾ ಇರಲೆಂದು ಶುಭ ಹಾರೈಸಿದರು. ಇದಕ್ಕೂ ಮುನ್ನ ಆಸ್ಪತ್ರೆಯ ಪ್ರತಿ ವಿಭಾಗಕ್ಕೂ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯಗಳನ್ನು ವೀಕ್ಷಿಸಿ ಪ್ರಶಂಸಿಸಿದರು.


ಶ್ರೀಗಳನ್ನು ಡಾ. ಗೋಪಾಲಕೃಷ್ಣ ಮತ್ತು ಭಾರತಿ ದಂಪತಿಗಳು ಪೂರ್ಣ ಕುಂಭ ಸ್ವಾಗತ ನೀಡಿ ಪಾದಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸೀತಾರಾಮ್ ಭಟ್, ಡಾ. ಆದಿತ್ಯರಾವ್, ಡಾ. ಅಂಕಿತ ಜಿ ಭಟ್, ಡಾ. ರೋಹಿತ್ ಜಿ ಭಟ್ ಮತ್ತು ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಸಿಬ್ಬಂಧಿಗಳು ಪಾಲ್ಗೊಂಡು ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು

Related posts

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya
error: Content is protected !!