21.6 C
ಪುತ್ತೂರು, ಬೆಳ್ತಂಗಡಿ
January 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ : ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಜ.14ರಿಂದ 18 ರವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.


ಇಂದು (ಜ. 14) ತೋರಣ ಮುಹೂರ್ತ, ಊರವರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.

ಈ ವೇಳೆ ದೇವಸ್ಥಾನದ 2025 ರ ನೂತನ ಕ್ಯಾಲೆಂಡರ್ ನ್ನು ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್ ಉಳಿಯಬೀಡು, ಅರ್ಚಕ ಯು.ವಿ. ಗುರುಪ್ರಸಾದ್ ನಿಡ್ವಣ್ಣಾಯ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್ , ಪವಿತ್ರಪಾಣಿ ಶ್ರೀಧರ ಶಬರಾಯ, ದೇವಪಾಲ ಅಜ್ರಿ ಉಳಿಯಬೀಡು, ಯುವರಾಜ ಜೈನ್ ಉಳಿಯಬೀಡು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರುಕ್ಮಯ್ಯ ಗೌಡ ಪದಳ, ಕಾರ್ಯದರ್ಶಿ ಆನಂದ ಗೌಡ ಕಲ್ಕುಡಂಗೆ, ಸೇವಾ ಸಮಿತಿ ಅಧ್ಯಕ್ಷ ಹರೀಶ್ ಗೌಡ ಅಪ್ರೋಡಿ, ಕಾರ್ಯದರ್ಶಿ ಶರತ್ಚಂದ್ರ ಹಿರ್ತಡ್ಕ ಹಾಗೂ ಜಾತ್ರೋತ್ಸವ ಸಮಿತಿ , ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಜೆ ಧ್ವಜಾರೋಹಣ , ರಾತ್ರಿ ನಡೆಯಲಿರುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ನಿತೇಶ್ ಬಲ್ಲಾಳ್ ಉಳಿಯಬೀಡು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನಪರಿಷತ್ ಶಾಸಕರಾದ ಕೆ. ಪ್ರತಾಪ್ ಸಿಂಹ ನಾಯಕ್ ಆಗಮಿಸಲಿದ್ದಾರೆ.

ಈ ವೇಳೆ ಧರ್ಮಸ್ಥಳ ಕಲ್ಲೇರಿ ಶ್ರೀ ಸಿದ್ಧಿವಿನಾಯಕ ಸ್ಟೋರ್ ಉದ್ಯಮಿಗಳಾದ ರತ್ನಾಕರ ಪ್ರಭು, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದರಾದ ಬಿ. ಸೀತಾರಾಮ ತೋಳ್ಪಾಡಿತ್ತಾಯ ಧರ್ಮಸ್ಥಳ, ಹಿರಿಯ ಯಕ್ಷಗಾನ ಕಲಾವಿದ ನರೇಂದ್ರ ಕುಮಾರ್ ಉಜಿರೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಪ್ರಸಿದ್ಧ ಅತಿಥಿ ಕಲಾವಿದರಿಂದ ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ ಜರಗಲಿದೆ.

Related posts

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!