37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಹತ್ಯಡ್ಕ : ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ-ಶಿಶಿಲ ಇದರ ಸಹಭಾಗಿತ್ವದೊಂದಿಗೆ ಮಹಿಳೆಯರಿಗಾಗಿ 30 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಅರಸಿನಮಕ್ಕಿ, ಅಂಗನವಾಡಿ ಕೇಂದ್ರ, ನಾವಳೆ- ಪಾಲೆಂಜದಲ್ಲಿ ಜ. 14 ರಂದು ನಡೆಯಿತು.

ಅರಸಿನಮಕ್ಕಿ ಸಮಾಜ ಸೇವಕ ಧರ್ಮರಾಜ ಗೌಡ ಅಡ್ಕಾಡಿ ಮಹಿಳೆಯರು ತನ್ನ ಕಾಲ ಮೇಲೆ ನಿಂತುಕೊಂಡು ಸ್ವಾಲಂಭಿಯಾಗಿ ಬದುಕು ನಡೆಸಬೇಕೆಂದು ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಶ್ರೀಮತಿ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ.
ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಯಾರಿಗೂ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯವೆಂದು ತಿಳಿಸಿದರು.

ವೇದಿಕೆಯಲ್ಲಿ ಅರಿಕೆಗುಡ್ಡೆ ಜೀರ್ಣೋದ್ಧಾರ ಸಮಿತಿ ಶ್ರೀ ವನದುರ್ಗ ದೇವಸ್ಥಾನದ ಅಧ್ಯಕ್ಷ ಪ್ರಕಾಶ್ ಪಿಲಿಕಬೆ, ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.),ಮಾಜಿ ಅಧ್ಯಕ್ಷರು ಹಾಗೂ ನೂತನ ಹಾಲಿ ಸದಸ್ಯ ರಾಘವೇಂದ್ರ ನಾಯಕ್ ಬರ್ಗುಳ, ಅರಸಿನಮಕ್ಕಿ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ಜಯಪ್ರಸಾದ್‌ ಶೆಟ್ಟಿಗಾ‌ರ್, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾದ ಶ್ರೀಮತಿ ಶಾಂತ ಪಿ. ಶೆಟ್ಟಿ, ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಮಹಿಳಾ ಕಾರ್ಯದರ್ಶಿ ಶ್ರೀಮತಿ ನೀತಾ ರಾಧೇಶ್ ಆಚಾರ್ಯ, ನಾವಳೆ- ಪಾಲೆಂಜ ಬಾಲವಿಕಾಸ ಕೇಂದ್ರದ ಅಧ್ಯಕ್ಷರಾದ ಶ್ರೀಮತಿ ಕೇಶಾವತಿ, ನಾವಳೆ ಟೈಲರಿಂಗ್‌ ತರಬೇತಿದಾರರಾದ ಶ್ರೀಮತಿ ವಿಮಲ ಆ‌ರ್. ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಒಟ್ಟು 23 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಶ್ರೀಮತಿ ಪೂರ್ಣಿಮಾ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ನಮಿತಾ ಧನ್ಯವಾದವಿತ್ತರು.

Related posts

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!