ಗುರುವಾಯನಕೆರೆ : ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿ 9 ರಿಂದ 12ವರೆಗೆ ಬ್ರಹ್ಮ ಕುಂಭಾಭಿಷೇಕ ನಡೆಯಲಿದ್ದು, ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದೆ.
ಈ ವೇಳೆ ಗುರುವಾಯನಕೆರೆ ನವಶಕ್ತಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರು ದೈವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ ನೀಡಿದ್ದಾರೆ.