ಬೆಳ್ತಂಗಡಿ : ಬೆಳ್ತಂಗಡಿ ಮಾದರಿ
ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ, ಶಾಲಾ ಮುಖ್ಯೋಪಾಧ್ಯಾಯರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕಮಲಾಕ್ಷ ಆಚಾರ್ಯ (77ವ) ಇ೦ದು ಸಂಜೆ 8 ಗಂಟೆಗೆ ಮಂಗಳೂರಿನಲ್ಲಿ ನಿಧನರಾದರು.
ಇವರು ಬೆಳ್ತಂಗಡಿ ಮಾದರಿ
ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ, ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕಮಲಾಕ್ಷ ಆಚಾರ್ಯ ಅವರು ಭಾರತ ನಾಟ್ಯ ತರಗತಿಯನ್ನು ನಡೆಸುತ್ತಿದ್ದು, ಹಲವು ಮಂದಿ ಶಿಷ್ಯ ವರ್ಗವನ್ನು ಹೊಂದಿದ್ದರು. ಇವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತ ಗೊಂಡಿದ್ದಾರೆ.ಮೃತರು ಇಬ್ಬರು ಪುತ್ರಿಯರು ಹಾಗೂ ಬಂಧು ವಗ೯, ಶಿಷ್ಯ ವರ್ಗವನ್ನು ಅಗಲಿದ್ದಾರೆ. ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ಲಾಯಿಲ ಸಂತಾಪ ಸೂಚಿಸಿದ್ದಾರೆ.
ನಾಳೆ ಬೆಳಗ್ಗೆ 10 ಗಂಟೆಗ ಬೆಳ್ತಂಗಡಿ ಲಾಯಿಲದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
previous post