ಬೆಳ್ತಂಗಡಿ: ಮಾಲಾಡಿ ಯುವಕನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಜ.14 ರಂದು ನಡೆದಿದೆ.
ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಕೊಲ್ಪೆದಬೈಲು ನಿವಾಸಿ ನಾಗೇಶ್ ಕುಲಾಲ್ (33 ವರ್ಷ) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ಪೋಲೀಸ್ ತನಿಖೆಯಿಂದ ತಿಳಿದು ಬೇಕಾಗಿದೆ. ಈ ಸಂಭಂಧ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.