37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.48ಕ್ಕೆ ಗೋಧೂಳಿ ಲಗ್ನದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.


ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.


ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು 12,900 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.


ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 25 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 9663464648/ 8147263422

Related posts

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya
error: Content is protected !!