ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಗಳಾದ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಎನ್ ಎಸ್ ಎಸ್ ವಿದ್ಯಾರ್ಥಿಗಳ ಸೃಜನಶೀಲತೆ, ನಾಯಕತ್ವ, ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ ಎಂದರು.
ಅತಿಥಿಗಳಾದ ನಡ ಗ್ರಾಮ ಪಂಚಾಯತ್ ನ ಸದಸ್ಯ ಪ್ರವೀಣ್ ವಿ ಜಿ ಮಾತನಾಡತ್ತಾ, ಆಧುನಿಕ ಕಾಲದಲ್ಲಿ ಅತಿಯಾದ ತಂತ್ರಜ್ಞಾನದ ಬಳಕೆಯಿಂದ ಯುವ ಜನಾಂಗ ದಾರಿ ತಪ್ಪುತ್ತಿದೆ. ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಮತ್ತು ಶಿಕ್ಷಣವನ್ನು ಪಡೆಯುವುದರೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್, ಘಟಕ ನಾಯಕ ಅಶ್ವಥ್ ಉಪಸ್ಥಿತರಿದ್ದರು.
ಘಟಕ ನಾಯಕಿ ಅನುಕ್ಷಾ ಸ್ವಾಗತಿಸಿದರು . ಎನ್ ಎಸ್ ಎಸ್ ಕಾರ್ಯಕ್ರಮ ಆಧಿಕಾರಿ ಶಂಕರ್ ರಾವ್ ಧನ್ಯವಾದವಿತ್ತರು. ಕು ಜೀವನ್ಯ ನಿರೂಪಿಸಿದರು.