ಬೆಳ್ತಂಗಡಿ : ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಬೆಳ್ತಂಗಡಿ ವತಿಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಜ.14 ರಂದು ಬೆಳ್ತಂಗಡಿಯ ಸಮಾಜಮಂದಿರ ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದ ವಠಾರದಲ್ಲಿ ವಿದ್ಯುದ್ದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ ಲಯನ್ಸ್ ಯಕೋತ್ಸವ ನೆರವೇರಿತು.
ಇದೇ ವೇಳೆ ವೇದಿಕೆಯಲ್ಲಿ ಮಂಡಳಿಯ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಾದ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಹರೀಶ್ ಶೆಟ್ಟಿ ಮಣ್ಣಾವು, ಚಂದ್ರಶೇಖರ ಸರಪಾಡಿ, ಮಹೇಶ್ ಮಣಿಯಾಣಿ ದೊಡ್ಡತೋಟ, ಪದ್ಮನಾಭ ಶೆಟ್ಟಿ ಕನ್ನಡಿಕಟ್ಟೆ, ಬಾಲಕೃಷ್ಣ ನಾಯ್ಕ ಬೆಳಾಲು, ಚಂದ್ರಶೇಖರ ಧರ್ಮಸ್ಥಳ, ಸಂಜೀವ ಪೂಜಾರಿ ಬೆಳಾಲು, ವಸಂತ ಗೌಡ ಕಾಯರ್ತ್ತಡ್ಕ, ಕುಶಾಲಪ್ಪ ನಾಯ್ಕ ಬೆಳಾಲು ಅವರಿಗೆ ಲಯನ್ಸ್ ಯಕ್ಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರಿಂದ ಯಕ್ಷಗಾನ ಬಯಲಾಟ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ನೆರವೇರಿತು.
ಬೆಳಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಿಸಿ ಅನ್ನಸಂತರ್ಪಣೆ ನೆರವೇರಿತು. ರಾತ್ರಿ ಗಂಟೆ 7 ರಿಂದ 12 ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರಿಂದ ಯಕ್ಷಗಾನ ಬಯಲಾಟ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಪ್ರದರ್ಶನಗೊಂಡಿತು.
ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ಲಯನ್ಸ್ ಜಿಲ್ಲಾ ಗವರ್ನರ್ ಬಿ.ಎಂ.ಭಾರತಿ, ಪ್ರಾಂತ್ಯಾಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಜೈನ್‌ಪೇಟೆ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ, ಯಕ್ಷ ಸಂಯೋಜಕ ಸುರೇಶ್ ಶೆಟ್ಟಿ ಲಾಯಿಲ, ವಲಯಾಧ್ಯಕ್ಷ ಉಮೇಶ್ ಶೆಟ್ಟಿ, ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಲಯನ್ಸ್ ಸದಸ್ಯರು ಉಪಸ್ಥಿತರಿದ್ದರು.
ಶಿಕ್ಷಕ ಧರಣೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.