ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅನುಷ್ಕಾ ಶೆಟ್ಟಿ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಶ್ರೀ ದುರ್ಗಾ ಫರ್ನಿಚರ್ ನ ಉಮೇಶ್ ಶೆಟ್ಟಿ ಮತ್ತು ಸವಿತಾ ಶೆಟ್ಟಿ ದಂಪತಿಯ ಪುತ್ರಿ.
ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.