January 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

ಪಟ್ರಮೆ : ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಜ.14ರಿಂದ 18 ರವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ರಾತ್ರಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಅನುವಂಶಿಕ ಆಡಳಿತ ಮೊಕ್ತೇಸರರು ನಿತೇಶ್ ಬಲ್ಲಾಳ್ ಉಳಿಯಬೀಡು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಆಗಮಿಸಿದರು. ವೇದಿಕೆಯಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್ , ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರುಕ್ಮಯ್ಯ ಗೌಡ ಪದಳ, ಕಾರ್ಯದರ್ಶಿ ಆನಂದ ಗೌಡ ಕಲ್ಕುಡಂಗೆ, ಸೇವಾ ಸಮಿತಿ ಅಧ್ಯಕ್ಷ ಹರೀಶ್ ಗೌಡ ಅಪ್ರೋಡಿ, ಕಾರ್ಯದರ್ಶಿ ಶರತ್ಚಂದ್ರ ಹಿರ್ತಡ್ಕ ಉಪಸ್ಥಿತರಿದ್ದರು.

ಈ ವೇಳೆ ಧರ್ಮಸ್ಥಳ ಕಲ್ಲೇರಿ ಶ್ರೀ ಸಿದ್ಧಿವಿನಾಯಕ ಸ್ಟೋರ್ ಉದ್ಯಮಿಗಳಾದ ರತ್ನಾಕರ ಪ್ರಭು, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದರಾದ ಬಿ. ಸೀತಾರಾಮ ತೋಳ್ಪಾಡಿತ್ತಾಯ ಧರ್ಮಸ್ಥಳ, ಹಿರಿಯ ಯಕ್ಷಗಾನ ಕಲಾವಿದ ನರೇಂದ್ರ ಕುಮಾರ್ ಉಜಿರೆ ಸನ್ಮಾನಿಸಲಾಯಿತು. ಹಾಗೂ ತಾಳಮದ್ದಳೆಯ ಹಿರಿಯ ಅರ್ಥಧಾರಿ ಮತ್ತು ಕೃಷಿಕರಾದ ಸೂರ್ಯನಾರಾಯಣ ಶರ್ಮ ಎಲಿಕಳ ರವರಿಗೆ ಯಕ್ಷ ಭಾರತಿ ದಶಕ ಸಂಭ್ರಮದ ಸೇವಾ ಗೌರವ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ , ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕು| ಭವ್ಯ ಕಾಯಿಲ ಪ್ರಾರ್ಥಿಸಿದರು. ಸುಧಾಶ್ರೀ ಕೆಮನೋಡಿ ಸ್ವಾಗತಿಸಿ, ರುಕ್ಮಯ್ಯ ನೆಕ್ಕಿಲು ಧನ್ಯವಾದವಿತ್ತರು. ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರೂಪಿಸಿದರು.

ರಾತ್ರಿ ಪ್ರಸಿದ್ಧ ಅತಿಥಿ ಕಲಾವಿದರಿಂದ ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ ನಡೆಯಿತು..

ಚಿತ್ರ : ರಾಜೇಶ್ ಪಟ್ರಮೆ

Related posts

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya
error: Content is protected !!