23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಫಂಡಿಜೆ: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಜೀವನದ ಶೈಲಿಯನ್ನು ಬದಲಿಸುದರೊಂದಿಗೆ ಅವರಿಲ್ಲಿನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ” ಎಂದು ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ಕೆ ಪಾಣೂರು ಹೇಳಿದರು.

ಅವರು ದ ಕ ಜಿ ಪ ಹಿ ಪ್ರಾ ಶಾಲೆ ಫoಡಿಜೆವಾಳ್ಯ ಇಲ್ಲಿ ನಡೆಯುತ್ತಿರುವ ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಸಂತ ಅಂತೋನಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಲ್ವಿನ್ ಸೆರಾವೋ “ಎನ್ ಎಸ್ ಎಸ್ ವಿದ್ಯಾರ್ಥಿಗಳು ಶಿಬಿರದಲ್ಲಿ ಕಳೆಯುವ ಅಷ್ಟೂ ಸಮಯವು ಅವರ ವ್ಯಕ್ತಿತ್ವ ಹಾಗೂ ದೇಶದ ಸೇವೆ ಮಾಡುವಲ್ಲಿ ಸಹಕಾರಿಯಾಗಲಿ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ ಇಲ್ಲಿಯ ಗೌರವಾಧ್ಯಕ್ಷ ಅಮ್ಮಾಜಿ ಕೆ ಹಿರ್ತೊಟ್ಟು,ಕುಕ್ಕೇಡಿ ಗ್ರಾಮ ಪಂಚಾಯತಿನ ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರು, ಕುಕ್ಕೇಡಿ ಗ್ರಾಮ ಪಂಚಾಯತಿನ ಸದಸ್ಯ ದಿನೇಶ್ ಮೂಲ್ಯ, ಜನಾರ್ದನ ಪೂಜಾರಿ , ಶ್ರೀಮತಿ ಗೀತಾ, ಫoಡಿಜೆವಾಳ್ಯ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಭವನೀಶ್ ಫoಡಿಜೆ, ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಸ್ವಾತಿ, ಸಂತ ಅಂತೋನಿ ಪದವಿ ಕಾಲೇಜು ನಾರಾವಿಯ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕು.ಶರಣ್ಯ, ಎನ್ ಎನ್ ಎಸ್ ಕಾರ್ಯದರ್ಶಿಗಳಾದ ವಿವೇಕ್ ಹಾಗೂ ಕು.ರಶ್ವಿತಾ ಉಪಸ್ಥಿತರಿದ್ದರು.


ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ದಿನೇಶ್ ಬಿ.ಕೆ ಬಳಂಜ ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಸಹ ಯೋಜನಾಧಿಕಾರಿ ಅವಿನಾಶ್ ಲೋಬೊ ಧನ್ಯವಾದವಿತ್ತರು. ಸಹಯೋಜನಾಧಿಕಾರಿ ಸಂತೋಷ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

Related posts

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!