27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಸುಲ್ಕೇರಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜಾ ರವರ ಅಧ್ಯಕ್ಷತೆಯಲ್ಲಿ ಜ.16 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಹಿರಿಯ ಪಶು ವೈದ್ಯಕೀಯ ಪರೀಕ್ಷಕರು ರಮೇಶ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಶುಭಕರ ಪೂಜಾರಿ, ಪಂಚಾಯತ್‌ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ನಿರೂಪಿಸಿ, ವಂದಿಸಿದರು. ಕಾರ್ಯದರ್ಶಿ ಕೊರಗಪ್ಪ ಜಮಾ ಖರ್ಚು ಮತ್ತು ಅನುಪಾಲನ ವರದಿ ವಾಚಿಸಿದರು.

Related posts

ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ : ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ಸೇರಿದಂತೆ ಹಲವು ಪ್ರಶಸ್ತಿ

Suddi Udaya

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya
error: Content is protected !!