ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಸುಲ್ಕೇರಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜಾ ರವರ ಅಧ್ಯಕ್ಷತೆಯಲ್ಲಿ ಜ.16 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಹಿರಿಯ ಪಶು ವೈದ್ಯಕೀಯ ಪರೀಕ್ಷಕರು ರಮೇಶ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.
ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಶುಭಕರ ಪೂಜಾರಿ, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ನಿರೂಪಿಸಿ, ವಂದಿಸಿದರು. ಕಾರ್ಯದರ್ಶಿ ಕೊರಗಪ್ಪ ಜಮಾ ಖರ್ಚು ಮತ್ತು ಅನುಪಾಲನ ವರದಿ ವಾಚಿಸಿದರು.