ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಯೋಜಿಸಲ್ಪಡುವ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭವು ಜ.17 ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.
ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಕಾಲೇಜು ಪ್ರಾಂಶುಪಾಲ ಡಾ. ಬಿ.ಎ ಕುಮಾರ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದಿ ಆಸ್ಟ್ರೇಲಿಯನ್ ನ್ಯಾಷನಲ್ ಯೂನಿವರ್ಸಿಟಿಯ ಪ್ರೊಫೆಸರ್ ಡಾ. ಕಾಳಿಯಪ್ಪ ಕಾಳಿರಾಜನ್, ಡಾ. ಬಾಲು ಕೆಂಚಪ್ಪ ಆರ್‌ಬಿಐ ಓಂಬುಡ್ಸ್‌ಮನ್ ಫಾರ್ ಕರ್ನಾಟಕ, ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಂಘಟನಾ ಕಾರ್ಯದರ್ಶಿ ಮತ್ತು ಸಂಚಾಲಕ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್ ಸ್ವಾಗತಿಸಿದರು. ಕಾರ್ಯಕ್ರಮದ ಮುಖ್ಯ ಸಲಹೆಗಾರ ಡಾ. ಜಿ.ವಿ. ಜೋಶಿ ಪ್ರಸ್ತಾವಿಸಿದರು. ಬಿವೋಕ್ ವಿಭಾಗದ ಅಶ್ವಿತ್ ಎಚ್. ಆರ್ ಮತ್ತು ಅಶ್ವಿನಿ ಜೈನ್ ನಿರೂಪಿಸಿದರು. ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಗಣರಾಜ್ ಕೆ. ವಂದಿಸಿದರು.