April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

ಬೆಳ್ತಂಗಡಿ (ಜ.16): ಉಪ್ಪಿನಂಗಡಿ – ಮಡಂತ್ಯಾರ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯವಿಲ್ಲದ ಕಾರಣ ವಿಧ್ಯಾರ್ಥಿಗಳು, ಕೂಲಿ ಕಾರ್ಮಿಕರು, ಉದ್ಯೋಗಸ್ಥರು ತುಂಬಾ ಅನಾನುಕೂಲ ಅನುಭವಿಸುತ್ತಿದ್ದು ಇದನ್ನು ನಿವಾರಿಸಲು ಉಪ್ಪಿನಂಗಡಿ – ಮಡಂತ್ಯಾರ್ ರಸ್ತೆಯಲ್ಲಿ ಸರ್ಕಾರಿ ಬಸ್ಸುಗಳನ್ನು ಪ್ರಾರಂಭಿಸಿ ಸುಮಾರು ವರ್ಷಗಳಿಂದ ಇರುವ ಪ್ರಯಾಣಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಣಿಯೂರು ಬ್ಲಾಕ್ ಸಮಿತಿ ನಿಯೋಗ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಗುರುವಾರ ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಣಿಯೂರು ಬ್ಲಾಕ್ ಅಧ್ಯಕ್ಷರಾದ ಮುಸ್ತಫ ಬಂಗೇರಕಟ್ಟೆ, ಕೋಶಾಧಿಕಾರಿ ಫೈಝಲ್ ಮೂರುಗೋಳಿ, ಬ್ಲಾಕ್ ಸಮಿತಿ ಸದಸ್ಯರಾದ ಬಿ.ಎಂ ರಝಾಕ್, ನೌಶಾದ್ ತೆಕ್ಕಾರ್ ಹಾಗೂ ಅಶ್ರಫ್ ಕಲ್ಲೇರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya
error: Content is protected !!