April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30 ನೇ ಪದವಿ ಪ್ರದಾನ ಸಮಾರಂಭವು ಜ.17 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

ಸಮಾರಂಭದಲ್ಲಿ ಭಾರತ ಸರಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯುಷ್ ಸಚಿವರಾದ ಪ್ರತಾಪರಾವ್ ಗಣಪತರಾವ್ ಜಾಧವ್ ಇವರು ಪದವಿ ಪ್ರದಾನ ಮಾಡಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಪವಿತ್ರ ಪುಣ್ಯ ಕ್ಷೇತ್ರಗಳೊಂದಾಗಿದೆ.ಇಂದಿನ ಜೀವನ ಪದ್ದತಿಯಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಕ್ಕೆ ದೇಶ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಆರೋಗ್ಯ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಪಣತೊಟ್ಟವರು. ನೂತನ‌ ಪಧವಿದಾರರು ಒಳ್ಳೆಯ ತಜ್ಞರಾಗಿ ಪ್ರಾಮಾಣಿಕ ಸೇವೆ ಮಾಡಬೇಕೆಂದರು.

ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿ ಮಾತನಾಡಿ ವೆಲ್ ನೆಸ್ ಸೆಂಟರ್ ಗ್ರಾಮೀಣ ಪರಿಸರದಲ್ಲಿ ಕೆಲಸ ಮಾಡುತ್ತಿದೆ.

ಧರ್ಮಸ್ಥಳ,ಪರೀಕ,ಬೆಂಗಳೂರಿನ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಕೇಂದ್ರಗಳು ಪಂಚೇಂದ್ರಿಯಗಳ ನಿಯಂತ್ರಣ ಹಾಗೂ ಆರೋಗ್ಯದ ರಕ್ಷಣೆಯ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಿಸುವ ಸೇವೆ ನೀಡುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್, ಆಯುಷ್ ಇಲಾಖೆ ಅಧಿಕಾರಿ ಕಮಲಾ ಬಾಯಿ,ನವದೆಹಲಿ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಯೋಗ ಮತ್ತು ನ್ಯಾಚುರೋಪತಿ, ನಿರ್ದೇಶಕ ಡಾ. ರಾಘವೇಂದ್ರ ರಾವ್,ಬೆಂಗಳೂರು ರಾಷ್ಟ್ರೀಯ INYGMA ಅಧ್ಯಕ್ಷ ಡಾ. ನವೀನ್ ವಿಶ್ವೇಶ್ವರಯ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಹೇಮಾವತಿ ವೀ ಹೆಗ್ಗಡೆಯವರು,ಸುಪ್ರಿಯಾ ಹರ್ಷೇಂದ್ರ ಕುಮಾರ್,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ್ಚಂದ್ರ ಎಸ್, ಉಜಿರೆ ಶ್ರೀ ಧ. ಮಂ. ಶಿಕ್ಷಣ ಸಂಸ್ಥೆ ಉಪಾಧ್ಯಕ್ಷರುಗಳಾದ ಪ್ರೊ. ಎಸ್. ಪ್ರಭಾಕರ್, ಡಿ. ಸುರೇಂದ್ರ ಕುಮಾರ್, ಉಪಸ್ಥಿತರಿದ್ದರು.ಉಜಿರೆ ಶ್ರೀ ಧ. ಮಂ. ಪ್ರ. ಯೋ ಕಾಲೇಜು ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಡಾ.ಶಿವಪ್ರಸಾದ್ ಕೆ ವಂದಿಸಿದರು.

Related posts

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!