23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆಯು ಜ.16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಉನ್ನತೀಕರಿಸಿದ ಶಾಲೆ ಮಾಯ ಬೆಳಾಲು ಇಲ್ಲಿನ ವಿದ್ಯಾರ್ಥಿನಿ ಸೃಜನ್ಯ ವಹಿಸಿಕೊಂಡರು .

ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರು ವಿದ್ಯಾರ್ಥಿಗಳಿಗೆ ಗ್ರಾಮ ಸಭೆಯ ಮಹತ್ವ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ವಿದ್ಯಾರ್ಥಿಗಳು ಅನುಸರಿಸಬೇಕಾದ ರೀತಿ ನೀತಿಗಳು ಹಾಗೂ ಗ್ರಾಮ ಪಂಚಾಯಿತಿಗಳಿಂದ ಶಾಲೆಗಳಿಗೆ ಸಿಗುವಂತ ಸೌಲಭ್ಯಗಳು ಹಾಗೂ ಅನುದಾನಗಳ ಬಗ್ಗೆ ವಿವರವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಸಂಚಾರಿ ಪೊಲೀಸ್ ಸ್ಟೇಷನ್ ಎಎಸ್ಐ ಚಿನ್ನಪ್ಪ ಭಾಗವಹಿಸಿ ರೋಡ್ ರೂಲ್ಸ್ ಬಗ್ಗೆ ಹಾಗೂ ಕಾನೂನುಗಳ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್ .ಡಿ. ಎಂ ಪ್ರೌಢಶಾಲೆ ಬೆಳಾಲು ಇಲ್ಲಿನ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಇವರು ವಿದ್ಯಾರ್ಥಿಗಳು ಪ್ರಸ್ತುತ ದಿನಗಳಲ್ಲಿ ಎದುರಿಸುವ ಸಮಸ್ಯೆಗಳು ಹಾಗೂ ತೊಂದರೆಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

ವಿದ್ಯಾರ್ಥಿಗಳು ಗ್ರಾಮಸಭೆಯಲ್ಲಿ ತಮ್ಮ ಬೇಡಿಕೆಯನ್ನು ಮುಂದಿಟ್ಟರು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸತೀಶ್ ಎಳ್ಳುಗದ್ದೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ತಾರಾನಾಥ್ ನಾಯ್ಕ್, ಆಶಾ ಕಾರ್ಯಕರ್ತೆ ನಿರ್ಮಲ, ಬೆಳಾಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ಮಾಯ, ಎಸ್‌ಡಿಎಂ ಬೆಳಾಲು, ಕೊಲ್ಪಾಡಿ ಪೆರಿಯಡ್ಕ ಹಾಗೂ ಸರಸ್ವತಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು. ಬೆಳಾಲು ಗ್ರಾಮ ಪಂಚಾಯತಿ ನ ಸಿಬ್ಬಂದಿಗಳು ಸಹಕರಿಸಿದರು.

Related posts

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!