ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ಗೆ ಬೆಳ್ತಂಗಡಿ ತಾಲೂಕಿನಿಂದ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ,ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಸತೀಶ್ ಕೆ. ಕಾಶಿಪಟ್ಣ ಹಾಗೂ ಬೆಳ್ತಂಗಡಿ ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಹಕಾರಿ ಸಂಘದ ನಿರ್ದೇಶಕ,ಪೆರಾಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಪ್ರವೀಣ್ ಗಿಲ್ಬರ್ಟ್ ಪಿಂಟೊ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.