April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಯೋಜಿಸಲ್ಪಡುವ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭವು ಜ.17 ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಕಾಲೇಜು ಪ್ರಾಂಶುಪಾಲ ಡಾ. ಬಿ.ಎ ಕುಮಾರ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದಿ ಆಸ್ಟ್ರೇಲಿಯನ್ ನ್ಯಾಷನಲ್ ಯೂನಿವರ್ಸಿಟಿಯ ಪ್ರೊಫೆಸರ್ ಡಾ. ಕಾಳಿಯಪ್ಪ ಕಾಳಿರಾಜನ್, ಡಾ. ಬಾಲು ಕೆಂಚಪ್ಪ ಆರ್‌ಬಿಐ ಓಂಬುಡ್ಸ್‌ಮನ್ ಫಾರ್ ಕರ್ನಾಟಕ, ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಂಘಟನಾ ಕಾರ್ಯದರ್ಶಿ ಮತ್ತು ಸಂಚಾಲಕ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್ ಸ್ವಾಗತಿಸಿದರು. ಕಾರ್ಯಕ್ರಮದ ಮುಖ್ಯ ಸಲಹೆಗಾರ ಡಾ. ಜಿ.ವಿ. ಜೋಶಿ ಪ್ರಸ್ತಾವಿಸಿದರು. ಬಿವೋಕ್ ವಿಭಾಗದ ಅಶ್ವಿತ್ ಎಚ್. ಆರ್ ಮತ್ತು ಅಶ್ವಿನಿ ಜೈನ್ ನಿರೂಪಿಸಿದರು. ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಗಣರಾಜ್ ಕೆ. ವಂದಿಸಿದರು.

Related posts

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya
error: Content is protected !!