ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಜಾತ್ರೋತ್ಸವವು ನಡೆಯುತ್ತಿದ್ದು ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ,ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಕೆ.ಪಿಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಹಾಗೂ ಭಕ್ತರು ಉಪಸ್ಥಿತರಿದ್ದರು.