ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್ ಇವರು ಮಚ್ಚಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ನಿರ್ಮಾಣಗೊಂಡ ಶಾಲಾ ಶೌಚಾಲಯ ಕಾಮಗಾರಿಯನ್ನ ಪರಿಶೀಲಿಸಿದರು. ಹಾಗೂ ಶಾಲಾ ಮಕ್ಕಳೊಂದಿಗೆ ಸಾಮಾನ್ಯ ಜ್ಞಾನಕ್ಕೆ ಕುರಿತಂತೆ ಸಂವಾದ ನಡೆಸಿದರು.
ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ನರೇಗಾ ತಾಂತ್ರಿಕ ಸಹಾಯಕರು ಶರಣ್ ರೈ, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕಿಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.