29.2 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರು ಈ ಬಗ್ಗೆ ಕಾನೂನು ಸಚಿವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ಕೆ. ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕೆ ಡಿ ಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್, ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೊ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೊಸರ್,ಕೋಶಾಧಿಕಾರಿ ಪ್ರಶಾಂತ್ ಎಂ. ಮಾಜಿ ಅಧ್ಯಕ್ಷರಾದ ಶಿವಕುಮಾರ್ ಎಸ್.ಎಂ, ಹಿರಿಯ ವಕೀಲರಾದ ಭಗೀರಥ, ಜಿ, ಬಿ.ಕೆ ಧನಂಜಯ ರಾವ್ ಮತ್ತು ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

Related posts

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya
error: Content is protected !!