ಮಚ್ಚಿನ : ರೂ. 4 ಕೋಟಿ ವೆಚ್ಚದ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಜ.18 ರಂದು ಶಿಲಾನ್ಯಾಸವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್, ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮವತಿ, ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರು ಡಾ. ಹರ್ಷ ಸಂಪಿಗೆತ್ತಾಯ, ತಾಲೂಕು ಪಂಚಾಯತ್ ಸಿ ಇ ಓ. ಭವಾನಿ ಶಂಕರ್, ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ, ಜಿಲ್ಲಾ ಗ್ಯಾರಂಟಿ ಯೋಜನೆ ಸದಸ್ಯ ಶೇಖರ್ ಕುಕ್ಕೇಡಿ, ಕೆಡಿಪಿ ಸದಸ್ಯ
ಸಂತೋಷ್ ಕುಮಾರ್, ಮಚ್ಚಿನ ಗ್ರಾಮ ಪಂ ಸದಸ್ಯರಾದ ಚಂದ್ರಕಾಂತ್, ತಾಲೂಕು ಆರೋಗ್ಯ ಅಧಿಕಾರಿ ಸಂಜತ್ ಉಪಸ್ಥಿತರಿದ್ದರು.