April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ , ಅಲ್ಪಸಂಖ್ಯಾತರ ಹಾಗೂ ವಿಶೇಷ ವರ್ಗದ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸ್ಥಾಪಿಸಿದ ಕರ್ನಾಟಕ ವಸತಿ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ಮೊರಾರ್ಜಿ ದೇಸಾಯಿ/ಇಂದಿರಾ ಗಾಂಧಿ/ ಡಾ. ಬಿ.ಆರ್. ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೆಯ ತರಗತಿಯ ಪ್ರವೇಶಕ್ಕಾಗಿ 2025-26 ನೆಯ ಶೈಕ್ಷಣಿಕ ಸಾಲಿಗೆ ಆನ್-ಲೈನ್ ಅರ್ಜಿಯನ್ನು ಕೆಇಎ ಮೂಲಕ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಜ.13 ರಿಂದ ಜ. 25 ರ ಒಳಗೆ ವಿದ್ಯಾರ್ಥಿಗಳ ವಾಸಸ್ಥಳದ ತಾಲೂಕಿನ ಯಾವುದಾದರೂ ಸಮೀಪದ ವಸತಿ ಶಾಲೆಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಂಡಾಜೆ – 9242217114, ಮಚ್ಚಿನ 9741360212, ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ -9743335673 ನ್ನು ಸಂಪರ್ಕಿಸುವುದು.

Related posts

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya
error: Content is protected !!