ಧರ್ಮಸ್ಥಳ: ಸ್ಪೆಕ್ಟ್ರಮ್ ಧರ್ಮಸ್ಥಳ ಇವರ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ಜ.18 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಕ ನರೇಂದ್ರ, ಥೋಮಸ್, ರಮೇಶ್ ಹೆಚ್., ಗಣೇಶ್ ಭಟ್ ರವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ್ ರಾವ್, ರತ್ನಾರಾಜ್ ಜೈನ್, ಸುಧಾಕರ್ ಗೌಡ, ಪ್ರವೀಣ್ ದುರ್ಗಾ ಡೆಲಿಕೆಶಿ, ಶಂಕರ್ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಪೃಥ್ವಿಶ್ ಕಾರ್ಯಕ್ರಮವನ್ನು ನಿರೂಪಿಸಿದರು.