September 6, 2026
Uncategorized

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

ಧರ್ಮಸ್ಥಳ: ಸ್ಪೆಕ್ಟ್ರಮ್ ಧರ್ಮಸ್ಥಳ ಇವರ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ಜ.18 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಕ ನರೇಂದ್ರ, ಥೋಮಸ್, ರಮೇಶ್ ಹೆಚ್., ಗಣೇಶ್ ಭಟ್ ರವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ್ ರಾವ್, ರತ್ನಾರಾಜ್ ಜೈನ್, ಸುಧಾಕರ್ ಗೌಡ, ಪ್ರವೀಣ್ ದುರ್ಗಾ ಡೆಲಿಕೆಶಿ, ಶಂಕರ್ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಪೃಥ್ವಿಶ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya
error: Content is protected !!