25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ರಾಷ್ಟೀಯ ಸೇವಾ ಯೋಜನಾ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯುವ ದಿನದ ಅಂಗವಾಗಿ ಯುವಜನತೆ ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜರಗಿತು.


ಮುಖ್ಯ ಅತಿಥಿಯಾಗಿ ಯುವ ವಾಗ್ಮಿ, ಸಾವಯವ ಕೃಷಿಕ ಶ್ರೀ ಶಿವಪ್ರಸಾದ್ ಮಲೆಬೆಟ್ಟು ಭಾಗವಹಿಸಿ, ವಿವೇಕಾನಂದರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಯುವ ಜನತೆ ಭವಿಷ್ಯದ ಬಗ್ಗೆ ದೇಶಪ್ರೇಮದಿಂದ ಒಗ್ಗೂಡಿ ಭವ್ಯ ಭಾರತಕ್ಕೆ ಸಹಕಾರಿಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಶ್ರೀಯುತ ಸಂತೋಷ ವಹಿಸಿದ್ದರು. ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರಕಾಶ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಶ್ರೀ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

Suddi Udaya
error: Content is protected !!