ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ.20ರಿಂದ 23 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.

ಇಂದು ಬೆಳಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ, ಪಲ್ಲಕ್ಕಿ ಸಮರ್ಪಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಕಳೆಂಜ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಅಶೋಕ್ ಭಟ್ ಕಾಯಡ, ಬ್ರಹಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೇಶವ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಚಂದ್ರಶೇಖರ ಕೆ., ಆಡಳಿತ ಸಮಿತಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಬ್ರಹ್ಮಕಲಶೋತ್ಸವ ಸಮಿತಿ ಖಜಾಂಜಿ ವೆಂಕಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ, ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ಭಜನಾ ಕಾರ್ಯಕ್ರಮ, ಸಂಜೆ 5.30ಕ್ಕೆ ಕ್ಷೇತ್ರದ ತಂತ್ರಿಗಳಿಗೆ ಹಾಗೂ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ರಾತ್ರಿ 7.00ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ರಾತ್ರಿ 7.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8.30ಕ್ಕೆ ಮಹಾಪೂಜೆ, ನಡೆಯಲಿದೆ.

Related posts

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!