29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

ಬಳಂಜ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡಿರುವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ. 19 ರಂದು ಗೌರವಿಸಿ ಸನ್ಮಾನಿಸಲಾಯಿತು.

ಬಳಂಜ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅವರನ್ನು ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.

ಸುಮಾರು 46 ವರ್ಷಗಳ ಪರಂಪರೆಯಿರುವ ಬಳಂಜ ಬಿಲ್ಲವ ಸಂಘವು ಸಮಾಜಮುಖಿಯಾಗಿ ಗುರುತಿಸಿಕೊಂಡಿದೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕಲೆ, ಕ್ರೀಡೆ, ಸಾಂಸ್ಕೃತಿಕ, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ ಸಂಘವಾಗಿದೆ. ಸಂಘದ ಕಾರ್ಯವೈಖರಿಗೆ ಈ ಬಾರಿ ಸರಕಾರದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದೆ.

ಸನ್ಮಾನ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ‌ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಕಾರ್ಯದರ್ಶಿ ಗಂಗಾಧರ, ಬಳಂಜ ಸಂಘದ ನಿರ್ದೇಶಕರಾದ ದಿನೇಶ್ ಪೂಜಾರಿ ಅಂತರ, ರಂಜಿತ್ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಸದಸ್ಯೆ ಅಮೃತಾ ಎಸ್ ಕೋಟ್ಯಾನ್, ಬೇಬಿ! ಸ್ಮಯ ಎಸ್ ಕೋಟ್ಯಾನ್ ಜೊತೆಗಿದ್ದರು.

Related posts

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!