37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

ಇಂದಬೆಟ್ಟು:ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಉದ್ಘಾಟಿಸಿದರು.

ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ‌ ಗೌಡ ಅಧ್ಯಕ್ಷತೆ ವಹಿಸಿದ್ದರು.

ಗಣಕಯಂತ್ರ ಉದ್ಘಾಟನೆಯನ್ನು ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆ ಅಧ್ಯಕ್ಷರು , ಮಾಜಿ ಸಚಿವರಾದ ಕೆ. ಗಂಗಾಧರ ಗೌಡ ನೇರವೇರಿಸಿ ಮಾತನಾಡಿ ಭೂ ಸುಧಾರಣೆ ಕಾನೂನು ಬಂದ ನಂತರ ಜನರು ಸ್ವಾವಲಂಬಿಯಾಗಿ ಬದುಕುವಂತಾಗಿದೆ ಎಂದರು.

ಭದ್ರತಾ ಕೊಠಡಿ ಉದ್ಘಾಟನೆಯನ್ನು ಪುತ್ತೂರು ಮಾಜಿ ಶಾಸಕ ಸಂಜೀವ ಗೌಡ ಮಠಂದೂರು ನೆರವೇರಿಸಿ ಮಾತನಾಡಿ ಸಹಕಾರಿ ಕ್ಷೇತ್ರದಿಂದ ಸಮಾಜದ ಏಳಿಗೆಯಾಗಿದೆ ಎಂದರು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಡಿ.ಬಿ ಬಾಲಕೃಷ್ಣ ಗೌಡ, ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಪುತ್ತೂರು ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಬನ್ನೂರು, ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಜಂಟಿ ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಜೊತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ , ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ನಿರ್ದೇಶಕರು ಶ್ರೀಮತಿ ಸೌಮ್ಯಲತಾ ಜಯಂತ ಗೌಡ ,ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷ, ವಕೀಲರು ಶ್ರೀನಿವಾಸ ಗೌಡ ಬೆಳಾಲು,ಇಂದಬೆಟ್ಟು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಆಶಾಲತಾ ಗುಡಿಗಾರ್, ಬಂಗಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ, ಬಂಗಾಡಿ ಕೃಷಿಪತ್ತಿನ ಸಹಕಾರ ಸಂಘ, ಉಪಾಧ್ಯಕ್ಷ ಆನಂದ ಗೌಡ ಬರೆಮೇಲು, ಸೌಹಾರ್ದ ಅಭಿವೃದ್ದಿ ಅಧಿಕಾರಿ ವಿಜಯ್ ಬಿ.ಎಸ್.ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಅಧ್ಯಕ್ಷ ಸೀತಾರಾಮ ಗೌಡ ಹಾರ್ತಾಜೆ, ಮಿತ್ತಬಾಗಿಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷ ಆನಂದ ಗೌಡ ಮೈರ್ನೋಡಿ , ಕಡಿರುದ್ಯಾವರ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷ ನೋಣಯ್ಯ ಗೌಡ,ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷ ದೇಜಪ್ಪ ಗೌಡ , ಇಂದಬೆಟ್ಟು ಗ್ರಾಮ ಸಮಿತಿ ಅಧ್ಯಕ್ಷ ವಾಮನ ಗೌಡ ಕೊಯಮಜಲು , ಕಡಿರುದ್ಯಾವರ ಗ್ರಾಮ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಶೀತಲಡ್ಡ,ನಾವೂರು ಗ್ರಾಮ ಸಮಿತಿ ಅಧ್ಯಕ್ಷ ಜಯಂತ ಗೌಡ ನರ್ನೊಟ್ಟು, ಇಂದಬೆಟ್ಟು ಗ್ರಾಮ ಸಮಿತಿ ಅಧ್ಯಕ್ಷ ರಾಜೇಂದ್ರ ಗೌಡ ಕುಕ್ಕಿಮಾರ್, ಇಂದಬೆಟ್ಟು ಯುವ ವೇದಿಕೆ ಅಧ್ಯಕ್ಷ ಶೈಲೇಶ್ ಗೌಡ ಮನ್ನಡ್ಕ, ಕಡಿರುದ್ಯಾವರ ಯುವ ವೇದಿಕೆ ಅಧ್ಯಕ್ಷ ವಿಶ್ವೇಶ್ ಗೌಡ ಡೆಮ್ಮೆಜಾಲು ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಶಿವಕಾಂತ ಗೌಡ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ,ನಿರ್ದೇಶಕರುಗಳಾದ ಲಕ್ಷ್ಮಣ ಗೌಡ, ಬಾಲಕೃಷ್ಣ ಗೌಡ ಕೇರಿಮಾರ್, ದಾಮೋಧರ ಗೌಡ ಸುರುಳಿ,ಜಯಂತ ಗೌಡ ಗುರಿಪಳ್ಳ,ಸುಂದರ ಗೌಡ ಪುಡ್ಕೆತ್ತು,ಕೃಷ್ಣ ಪ್ಪ ಗೌಡ ಬೇಂಗಳ,ಧರ್ಮರಾಜ ಗೌಡ ಅಡ್ಕಾಡಿ,ಜಯಂತ ಗೌಡ ಓಣಿಯಾಲು,ಭರತ್ ಗೌಡ ಹಾನಿಬೆಟ್ಟು,ಕೆ.ಸಂಜೀವ ಗೌಡ ಪಾಂಚಜನ್ಯ, ಸರೋಜಿನಿ ವಿಜಯ ಕುಮಾರ್,ಡಿ.ಚೇತನಾ ಚಂದ್ರಶೇಖರ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷ ಅನಿಲ್ ಗೌಡ ಅಂತರ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣಾ ಶಿವಕಾಂತ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಯುವ ಮಹಿಳಾ ವೇದಿಕೆ ಅಧ್ಯಕ್ಷೆ ಅನುಪಮಾ ಸತೀಶ್ ಗೌಡ ಸಹಕರಿಸಿದರು.

ಮಮತಾ ಶಿವರಾಮ ಗೌಡ,ಭವ್ಯ ಸುರೇಂದ್ರ ಗೌಡ ಪ್ರಾರ್ಥನೆ ಹಾಡಿದರು, ಸಂಘದ ಅಧ್ಯಕ್ಷ ರಂಜನ್ ಜಿ ಗೌಡ ಸ್ವಾಗತಿಸಿದರು, ಪಂ.ಅ.ಅಧಿಕಾರಿ ಗಾಯತ್ರಿ ದಿನೇಶ್, ಸರೋಜಿನಿ ವಿಜಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!