ಉಜಿರೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳ ನೋಂದಾವಣಿ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಜ.20 ರಂದು ನಡೆಯಿತು.
ಶಿಬಿರವನ್ನು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ .ಬಿಎ ಕುಮಾರ ಹೆಗ್ಡೆ ಉದ್ಘಾಟಿಸಿ ಈ ಶಿಬಿರದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಂಡು ಈ ಯೋಜನೆಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಈ ಯೋಜನೆಯಿಂದ ತಾಲೂಕಿಗೆ ಬಿಡುಗಡೆಯಾದ ಅನುದಾನದ ವಿವರವನ್ನು ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಇಲ್ಲಿಯ ಅಧಿಕಾರಿ ಶ್ರೀಮತಿ ಮಂಜುಷಾ ಪದೇಲ, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಪ್ರಶಾಂತ್ ಡಿ ಬಳಂಜ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಶ್ರೀಮತಿ ಸೌಮ್ಯ ಲಾಯಿಲ, ಮರೀಟಾ ಪಿಂಟೋ, ಶರೀಫ್ ಸಬರಬೈಲು, ಹಕೀಮ್ ಕೊಕ್ಕಡ, ಯತೀಶ್ ಧರ್ಮಸ್ಥಳ, ಕೇಶವ ನಾಯ್ಕ ಉಪಸ್ಥಿತರಿದ್ದರು.
ತಾಲೂಕು ನೋಡಲ್ ಅಧಿಕಾರಿ ಹೇರಾಲ್ಡ್ ಸಿಕ್ವೆರಾ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.