32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ.ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ ಸಂಭವವಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ದಕ ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಹತ್ತಿರವಿದ್ದು ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ.ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ ಬೇಸಿಗೆಯಲ್ಲಿ ಪ್ರತಿ ವರ್ಷ ಬೆಂಕಿ ಅನಾಹುತ ಉಂಟಾಗುತ್ತಿದ್ದು ಹಲವು ಎಕರೆ ಪ್ರದೇಶ ನಾಶವಾಗುತ್ತಿದೆ.

Related posts

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

Suddi Udaya

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya
error: Content is protected !!