ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಜ.19 ರಂದು ಆಗಮಿಸಿ ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮುಖ್ಯಸ್ಥ ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಶಾಸಕ ಕೆ ಪ್ರತಾಪಸಿಂಹ ನಾಯಕ್, ಭರತ್ ಕುಮಾರ್, ರಾಮಚಂದ್ರ ಶೆಟ್ಟಿ, ಗುರುಪ್ರಸಾದ್, ಹರ್ಷಿತ್ ಉಜಿರೆ ಹಾಗೂ ಊರವರು ಉಪಸ್ಥಿತರಿದ್ದರು.