18.9 C
ಪುತ್ತೂರು, ಬೆಳ್ತಂಗಡಿ
January 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ರವರ ಅಧ್ಯಕ್ಷತೆಯಲ್ಲಿ ಜ.20 ರಂದು ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಪಶು ಸಂಗೋಪನೆ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ವಿಶ್ವನಾಥ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್‌ ಸದಸ್ಯ ಪ್ರವೀಣ್ ಹೆಬ್ಬಾರ್, ಶ್ರೀಮತಿ ಶೈಲಜಾ, ಮೋಹನ್ ಪೂಜಾರಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಕೆ.ಪಿ. ಕೇಶವ ಗೌಡ ನಿರೂಪಿಸಿದರು. ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ, ಜಿ.ಪಿ.ಡಿ.ಪಿ. ಬಗ್ಗೆ ಮಾಹಿತಿ ನೀಡಿದರು. ಸದಸ್ಯೆ ಶ್ರೀಮತಿ ಹೇಮಾವತಿ ಧನ್ಯವಾದವಿತ್ತರು.

Related posts

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya
error: Content is protected !!