ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ.20ರಿಂದ 23 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.
ಇಂದು (ಜ.21) ಉಷಃಪೂಜೆ, ಮಹಾಗಣಪತಿ ಹೋಮ, ಖನನಾದಿ ಸ್ಥಳಶುದ್ದಿ, ಬಿಂಬಶುದ್ಧಿ ಕಲಶ ಪೂಜೆ, ಅನುಜ್ಞಾ ಕಲಶ ಪೂಜೆ, ಪ್ರಾಯಶ್ಚಿತ್ತ ಹೋಮ. ಸಂಹಾರ ತತ್ತ್ವ ಕಲಶ ಪೂಜೆ, ಸಂಹಾರ ತತ್ತ್ವ ಹೋಮ, ಪ್ರಾಯಶ್ಚಿತ್ತ ಕಲಶಾಭಿಷೇಕ, ಅನುಜ್ಞಾ ಕಲಶಾಭಿಷೇಕ. ಸಂಹಾರ ತತ್ತ್ವ ಕಲಶಾಭಿಷೇಕ, ಜೀವಕಲಶ ಪೂಜೆ, ಜೀವೋದ್ವಾಸನೆ, ಅನುಜ್ಞಾಕಲಶಾಭಿಷೇಕ, ಕುಂಭೇಶ ಕರ್ಕರೀ ಪೂಜೆ, ನಿದ್ರಾಕಲಶ ಪೂಜೆ, ಶಯ್ಯಾಪೂಜೆ, ಬ್ರಹ್ಮಕಲಶ ಪೂಜೆ, ಪರಿಕಲಶಪೂಜೆ, ಜೀವಕಲಶ ಶಯ್ಯಾರೋಹಣ, ಪ್ರಸಾದ ವಿತರಣೆ ನಡೆಯಿತು.
ಈ ವೇಳೆ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ ನೀಡಿ ಎಲ್ಲಾ ವ್ಯವಸ್ಥೆಯನ್ನು ಪರಿಶೀಲಿಸಿ, ನಂತರ ದೇವಸ್ಥಾನದ ರಾಜಾಂಗಣಕ್ಕೆ ಫ್ಯಾನ್ , ಹಾಗೂ ಊಟದ ಬಟ್ಟಲು ಹಾಗೂ ಬ್ರಹ್ಮಕಲಶೋತ್ಸವಕ್ಕೆ ಸಕಲ ಸಹಕಾರ ನೀಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಕಳೆಂಜ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಅಶೋಕ್ ಭಟ್ ಕಾಯಡ, ಬ್ರಹಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೇಶವ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಚಂದ್ರಶೇಖರ ಕೆ., ಆಡಳಿತ ಸಮಿತಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಬ್ರಹ್ಮಕಲಶೋತ್ಸವ ಸಮಿತಿ ಖಜಾಂಜಿ ವೆಂಕಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ, ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.