ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಜ. 21 ರಂದು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಕಾಡುಪ್ರಾಣಿಗಳ ಉಪಟಳದಿಂದ ಬೆಳೆ ನಾಶವಾಗುತ್ತಿದೆ. ಪೆರಾಡಿ ಅಂಗನವಾಡಿ ಸುತ್ತ ಮುತ್ತ ದೊಡ್ಡ ಗಾತ್ರದ ಮರಗಳಿದ್ದು ಅದನ್ನು ತೆರವುಗೊಳಿಸುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
ಮರೋಡಿ- ಪೆರಾಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಹೇಳಿದರು.
ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕೃಷಿ ಅಧಿಕಾರಿ ಗಣೇಶ್ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್ ಎಲ್ಲರನ್ನು ಸ್ವಾಗತಿಸಿ, ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆ ,ಜಮಾಖರ್ಚಿನ ವಿವರಗಳನ್ನು ಸಭೆಯ ಮುಂದಿಟ್ಟರು.
ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಪಂಚಾಯತ್ ಸದಸ್ಯರಾದ ಪದ್ಮಶ್ರೀ, ಉಮೇಶ್ ಸಾಲಿಯಾನ್, ಅಶೋಕ್ ಪೂಜಾರಿ, ಧನಲಕ್ಷ್ಮಿ, ಸಮಿತಾ, ಉಮಾವತಿ, ಸುನಂದ, ಯಶೋಧ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ತಮ್ಮ ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.