ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜ.21ರಂದು ನಡೆಸಲಾಯಿತು.
ಶಿಬಿರವು ತಾಲೂಕು ವಿಕಲಚೇತನರ ಮೇಲ್ವಿಚಾರಕ ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಹಾಗೂ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು , ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.
ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.