April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ. 23 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.

ಇಂದು(ಜ.22) ಬೆಳಿಗ್ಗೆ ಮಹಾಗಣಪತಿ ಹೋಮ, ನಾಂದೀಪುಣ್ಯಾಹ, ರತ್ನನ್ಯಾಸಾದಿ ಪೀಠಪ್ರತಿಷ್ಠೆ, ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಅಷ್ಟಬಂಧ ಕ್ರಿಯೆ, ಜೀವಕಲಶಾಭಿಷೇಕ, ಪ್ರತಿಷ್ಠಾ ಪೂಜೆ, ಶಿಖರ ಪ್ರತಿಷ್ಠೆ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕವು ವಿಜೃಂಭಣೆಯಿಂದ ಜರುಗಿತು,

ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಕಳೆಂಜ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಅಶೋಕ್ ಭಟ್ ಕಾಯಡ, ಬ್ರಹಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೇಶವ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಚಂದ್ರಶೇಖರ ಕೆ., ಆಡಳಿತ ಸಮಿತಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಬ್ರಹ್ಮಕಲಶೋತ್ಸವ ಸಮಿತಿ ಖಜಾಂಜಿ ವೆಂಕಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ, ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಬೆಡಿ ಪ್ರದರ್ಶನ ನಡೆಯಲಿದೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!