ಬೆಳ್ತಂಗಡಿ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಣಮಕಾರಿಯಾಗಿ ಆರ್ಯ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ಜ.28 ರಂದು ಬೆಳಿಗ್ಗೆ 10 ಗಂಟೆಯಿಂದ ಇಂದಬೆಟ್ಟು ಸಂತ ಕ್ಲೇವಿಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಹೇಳಿದರು.
ಅವರು ಜ.23ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಅನುಷ್ಠಾನ ಶಿಬಿರದಲ್ಲಿ ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ, ನಡ, ನಾವೂರು, ಮತ್ತು ಇಂದಬೆಟ್ಟು ಗ್ರಾಮಗಳ ಪಂಚ ಗ್ಯಾರಂಟಿ ಯೋಜನೆಗಳ ಪಲಾನುಭವಿಗಳು ಭಾಗವಹಿಸಿ ಮಾಹಿತಿ ಪಡೆಯಬಹುದು, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಮಾಹಿತಿ ನೀಡಲಿದ್ದಾರೆ.
ಮುಂದಿನ ದಿನದಲ್ಲಿ ತಾಲೂಕಿನ ಎಲ್ಲಾ ಹೋಬಳಿಗಳಲ್ಲಿ ಈ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾದ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ , ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಸೌಮ್ಯ ಲಾಯಿಲ, ಮೇರಿಟ ಪಿಂಟೋ, ಯತೀಶ್ ಧರ್ಮಸ್ಥಳ, ವೀರಪ್ಪ ಮೋಯಿಲಿ, ವಾಸುದೇವ ಭಟ್, ಉಪಸ್ಥಿತರಿದ್ದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ನೇಮಿರಾಜ್ ಕಿಲ್ಲೂರು ಸ್ವಾಗತಿಸಿ, ಶ್ರೀಮತಿ ವಂದನಾ ಭಂಡಾರಿ ಧನ್ಯವಾದವಿತ್ತರು.