September 6, 2026
Uncategorizedಗ್ರಾಮಾಂತರ ಸುದ್ದಿ

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

ಅಳದಂಗಡಿ:-. ಅನಾಥವಾಗಿ ತಿರುಗಾಡುತ್ತಿದ್ದ ವಯೋವೃದ್ಧ
ರೋವ೯ರನ್ನು ಅಳದಂಗಡಿ ಹಿಂದೂ ಆಲಡ್ಕ ಕ್ಷೇತ್ರ ಸಂಘಟನೆಯವರು ಜ.22 ರಂದು ಶ್ರೀಗುರು ಚೈತನ್ಯ ಸೇವಾ ಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಬಡಗಕಾರಂದೂರು ಗ್ರಾಮದ ಕೆದ್ದು ಎಂಬಲ್ಲಿ ಬಾಡ ಎಂಬ ವಯೋ ವೃದ್ದರು ನಿರ್ಗತಿಕರಾಗಿ ಹಲವಾರು ವರ್ಷಗಳಿಂದ ಅಂಗಡಿ ಮುಂಗಟ್ಟುಗಳ ಮುಂಬಾಗ ,ಮರಗಳ ಕೆಳಗೆ ಹೀಗೆ ಅನಾಥವಾಗಿ ಇರುತ್ತಿದ್ದರು. ಯಾರಿಂದಲೂ ಕೈ ಚಾಚದೆ ,ಯಾರಿಗೂ ಕಿರಿಕಿರಿ ಉಂಟು ಮಾಡದೆ ಸ್ವಾಭಿಮಾನಿಯಾಗಿದ್ದು ಬಾಡಜ್ಜ ಎಂದು ಸಾರ್ವಜನಿಕರಿಂದ ಕರೆಯಲ್ಪಡುತ್ತಿದ್ದರು. ಸ್ಥಳೀಯರು ನೀಡಿದ ಅನ್ನ ಆಹಾರ ಸೇವಿಸುತ್ತಾ ಇದ್ದರು ಇತ್ತೀಚೆಗೆ ಕೆಲವು ದಿನಗಳಿಂದ ವಿಪರೀತವಾಗಿ ಚೈತನ್ಯ ಕಳೆದುಕೊಂಡಿದ್ದು ಇದನ್ನರಿತ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಅಳದಂಗಡಿ ಸಮಾಜ ಸೇವಾ ಸಂಘಟನೆಯು ಅಳದಂಗಡಿ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿ ವೇಣೂರು ಗುಂಡೂರಿಯ ಶ್ರೀ ಗುರು ಚೈತನ್ಯ ಸೇವಾಶ್ರಮದ ಹೊನ್ನಯ್ಯ ಕುಲಾಲ್ ಕಾಟಿಪಳ್ಳ ರ ಮಾರ್ಗದರ್ಶನ ದಂತೆಯೇ ವೇಣೂರಿನ ಪೋಲೀಸ್ ಠಾಣೆಗೆ ಮಾಹಿತಿ ನೀಡಿ ವೀರಕೇಸರಿ ಬಳಂಜ ಇವರ ಅಂಬುಲೆನ್ಸ್ ನಲ್ಲಿ ಕರೆದೊಯ್ದು ವೇಣೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು. ಬಳಿಕ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ಸೇರಿಸಲಾಯಿತು .ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್ ಮತ್ತು ಅಳದಂಗಡಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಮತಿ ಪೂರ್ಣಿಮ ಜೆ , ಗ್ರಾ. ಪಂ. ಸದಸ್ಯರಾದ ಹರೀಶ್ ಆಚಾರ್ಯ ಮಿತ್ತರೋಡಿ, ಅಳದಂಗಡಿ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ಕೊರಗಪ್ಪ , ಸಾಮಾಜಿಕ ಕಾರ್ಯಕರ್ತೆ ಹರಿಣಿ ಲಕ್ಷ್ಮಣ ಪೂಜಾರಿ ,ಕೀರ್ತನ್ ಇವರುಗಳು ಸಹಕರಿಸಿದರು.ಈ ಅನಾಥ ವಯೋ ವೃದ್ದರ ಬಂಧುಬಳಗ ದವರ ಮಾಹಿತಿ ಇದ್ದಲ್ಲಿ ವೇಣೂರು ಪೋಲೀಸ್ ಠಾಣೆಗೆ ನೀಡಿ ಸಹಕರಿಸಬೇಕು ಎಂದು ಶ್ರೀಗುರು ಚೈತನ್ಯ ಸೇವಾಶ್ರಮ ದ ಹೊನ್ನಯ್ಯ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya
error: Content is protected !!