18.6 C
ಪುತ್ತೂರು, ಬೆಳ್ತಂಗಡಿ
January 24, 2025
Uncategorizedಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

ಧಮ೯ಸ್ಥಳ : ಶ್ರೀಲಂಕಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಗೊಳಿಸಲು ತಮ್ಮ ಪೂರ್ಣ ಸಹಕಾರ ಹಾಗೂ ಬೇಕಾದ ಎಲ್ಲಾ ಮಾಹಿತಿ, ಮಾರ್ಗದರ್ಶನ ನೀಡಲಾಗುವುದು. ಶ್ರೀಲಂಕಾ ಸಣ್ಣ ದೇಶವಾದುದರಿಂದ ಅಲ್ಲಿ ಯೋಜನೆ ಯಶಸ್ವಿಯಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.ಅವರು ಗುರುವಾರ ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ ಆಗಮಿಸಿದ ೩೮ ಮಂದಿ “ಲಂಕಾ ಮೈಕ್ರೋ ಪೈನಾನ್ಸ್ ಪ್ರಾಕ್ಟಿಶನರ್ಸ್ ಅಸೋಸಿಯೇಶನ್” ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.

ಗ್ರಾಮೀಣ ಭಾರತವೇ ನೈಜ ಭಾರತದ ಪ್ರತಿಬಿಂಬವಾಗಿದೆ.
ಆದುದರಿಂದಲೇ ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಗ್ರಾಮರಾಜ್ಯದ ಪ್ರಗತಿ ಮೂಲಕ ರಾಮರಾಜ್ಯದ ಕನಸು ಕಂಡಿದ್ದರು. ಅವರು ಸಹಕಾರಿ ಚಳವಳಿ ಮೂಲಕ ದೇಶದ ಪ್ರಗತಿಗೆ ಆದ್ಯತೆ ನೀಡಿದರು. ಮಾನವ ಸಂಪನ್ಮೂಲ ಹಾಗೂ ನೆಲ, ಜಲ ಮತ್ತು ಪ್ರಾಕೃತಿಕ ಸಂಪನ್ಮೂಲಗಳ ಸದ್ಬಳಕೆಯೊಂದಿಗೆ ಗ್ರಾಮೀಣ ಪ್ರದೇಶದ ಪ್ರಗತಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭಿಸಿದ್ದು ಇದು ಯಶಸ್ವಿಯಾಗಿದೆ ಎಂದು ತಿಳಿಸಿದರು.

ಯೋಜನೆಯ ಎಲ್ಲಾ ವ್ಯವಹಾರಗಳು. ಕಾರ್ಯಕ್ರಮಗಳು
ಪಾರದರ್ಶಕವಾಗಿದು ಯಾರು ಬೇಕಾದರೂ ಇದನ್ನು ಅನುಸರಿಸಬಹುದು, ಯೋಜನೆಯ ಎಲ್ಲಾ ವ್ಯವಹಾರಗಳು. ಕಾರ್ಯಕ್ರಮಗಳು ಪಾರದರ್ಶಕವಾಗಿದ್ದು ಯಾರು ಬೇಕಾದರೂ ಇದನ್ನು ಅನುಸರಿಸಬಹುದು ಎಂದು ಹೇಳಿದರು.

“ಲಂಕಾ ಮೈಕ್ರೋ ಪೈನಾನ್ಸ್‌ ಪ್ರಾಕ್ಟಿಶನರ್ಸ್ ಅಸೋಸಿಯೇಶನ್” ಅಧ್ಯಕ್ಷ ವಾಸಂತ ಗುಣವರ್ಧನ ಮಾತನಾಡಿ, ಧರ್ಮಸ್ಥಳದ ಯೋಜನೆ ಬಗ್ಗೆ
ಅಭಿಪ್ರಾಯ ವ್ಯಕ್ತಪಡಿಸಿ ಶ್ರೀಲಂಕಾದಲ್ಲಿ ಇದೇ ಮಾದರಿ ಅನುಷ್ಠಾನಗೊಳಿಸಲು ಹೆಗ್ಗಡೆಯವರ ಅನುಮತಿ ಕೋರಿದರು. ಹೆಗ್ಗಡೆಯವರು ಸಂತೋಷದಿಂದ ಒಪ್ಪಿಗೆ ನೀಡಿ ಎಲ್ಲಾ ರೀತಿಯ ಸಹಕಾರ, ಮಾರ್ಗದರ್ಶನ ನೀಡುವುದಾಗಿ ಭರವಸೆ ನೀಡಿದರು.
ಶ್ರೀಲಂಕಾದ ಡೆಗಿರಿ ದುಲಾಂಗ ಚಮೀರ, ಮಿಥಿರಾಮ್ ಚಾಮಿಕ ಮಲ್‌ಕಾಂತಿ ರಾಣಸಿಂಘ, ಕನಗರತ್ನಂ ಲಕ್ಷಂಣ್‌ ಈರಜ್‌, ಎಸ್‌.ಪಿ.ಬೆನಿತಾಸ್‌, ರಾಮಸಾಮಿ ರಾಜೇಶ್‌ಖನ್ನಾ ಮಾತನಾಡಿ ಧರ್ಮಸ್ಥಳದ ಶಿಸ್ತು, ಆಡಳಿತ ವ್ಯವಸ್ಥೆ, ಆತಿಥ್ಯ, ಸ್ವಚ್ಛತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ ಕುಮಾ‌ರ್ ಎಸ್.ಎಸ್. ಪ್ರಾಸ್ತಾವಿಕ ಮಾತುಗಳೊಂದಿಗೆ ಯೋಜನೆಯ ಕಾರ್ಯವೈಖರಿಯ ಪಕ್ಷಿನೋಟ ನೀಡಿದರು. ಹೇಮಾವತಿ ವೀ. ಹೆಗ್ಗಡೆ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ್ ಪೈ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶೀಕ ನಿರ್ದೇಶಕ ಆನಂದ ಸುವರ್ಣ ಧನ್ಯವಾದವಿತ್ತರು. ನಿರ್ದೇಶಕ ರಾಜೇಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!